Home ನಮ್ಮ ಜಿಲ್ಲೆ ಉಡುಪಿ ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ ನಿಧನ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ ನಿಧನ

0

ತುಳು ಪಠ್ಯ ಪುಸ್ತಕ ಸಮಿತಿ, ತುಳು ನಿಘಂಟು ಯೋಜನೆ, ತುಳು ಜಾನಪದ ಪತ್ರಿಕೆ ಮಂಡಲಿಯಲ್ಲಿ ಕೂಡ ಸೇವೆ ಸಲ್ಲಿಸಿದ್ದರು

ಮಂಗಳೂರು: ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ 81 ವರ್ಷದ ವಾಮನ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು ಆಗಿದ್ದರು.
ಡಾ.ವಾಮನ ನಂದಾವರ ಅವರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪದವಿ ವ್ಯಾಸಂಗ, ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿಎಡ್, ಕರ್ನಾಟಕ ವಿವಿಯಿಂದ ಎಂ.ಎ ಕನ್ನಡ ಪದವಿ ಗಳಿಸಿ, ಕೋಟಿ ಚನ್ನಯ ಜಾನಪದೀಯ ಅಧ್ಯಯನ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದರು. ತುಳು ಪಠ್ಯ ಪುಸ್ತಕ ಸಮಿತಿ, ತುಳು ನಿಘಂಟು ಯೋಜನೆ, ತುಳು ಜಾನಪದ ಪತ್ರಿಕೆ ಮಂಡಲಿಯಲ್ಲಿ ಕೂಡ ಸೇವೆ ಸಲ್ಲಿಸಿದ್ದ ಇವರು, ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರು ಆಗಿದ್ದರು, ಬಂಟ್ವಾಳ ತಾಲ್ಲೂಕು ೧೨ನೇಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ
ವಹಿಸಿದ್ದರು, ತುಳುವರ ಕುಸಾಲ್ ಕುಸೆಲ್ ಕೃತಿಗೆ ಭಾರತೀಯ ಭಾಷಾ ಕೇಂದ್ರೀಯ ಸಂಸ್ಥೆಯ ಪ್ರಶಸ್ತಿ, ಹಾಗೂ ಸಿಂಗದನ ಮತ್ತು ಜಾನಪದ ಸುತ್ತ ಮುತ್ತ ಕೃತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪುರಸ್ಕಾರ, ‘ಕೋಟಿ ಚೆನ್ನಯ ಜಾನಪದೀಯ ಅಧ್ಯಯನದ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಬಹುಮಾನ. ಬನ್ನಂಜೆ ಬಾಬು ಅಮಿನ್ ಪ್ರಶಸ್ತಿ. ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ.ನಾಟಕ ಅಕಾಡೆಮಿ ಗೌರವ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಪುರಸ್ಕಾರದಿಂದ ಪುರಸ್ಕೃತರಾಗಿದ್ದರು.

Exit mobile version