ಹುಟ್ಟೂರಿನ ಶಾಲೆ ದತ್ತು ಪಡೆದ ರಿಷಭ್ ಶೆಟ್ಟಿ

0
17

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಮೂಡಿಸಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಕಾರಣನಾಗಿರುವ ನಟ ನಿರ್ದೇಶಕ ರಿಷಭ್ ಶೆಟ್ಟಿ ಕೇವಲ ಸಿನೆಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗೆ ಭೇಟಿನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು, ಈ ಸಂದರ್ಭದಲ್ಲಿ ಊರ ಪ್ರಮುಖರು, ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ಪಡೆದ ರಿಷಭ್ ಶೆಟ್ಟಿಯವರನ್ನು ಅಭಿನಂದಿಸಿದರು

Previous article‘ನಮ್ಮ ಕಾರ್ಗೋ’ ಟ್ರಕ್‌ಗಳ ಪರಿಶೀಲನೆ
Next articleಮಂತ್ರಾಲಯ ಶ್ರೀರಾಯರ ದರ್ಶನ ಪಡೆದ ಸಚಿವ ಕೆ.ಎಚ್ ಮುನಿಯಪ್ಪ