ಹುತಾತ್ಮ ಪ್ರಾಂಜಲ್​ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ

0
7

ಬೆಂಗಳೂರು: ಕ್ಯಾಪ್ಟನ್‌ ಪ್ರಾಂಜಲ್‌ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದು “ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.
ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ.ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದಿದ್ದಾರೆ.

Previous articleಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹ
Next articleಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪೂಂಜಾ