ಹುಬ್ಬಳ್ಳಿ: ಹುಬ್ಬಳ್ಳಿಗೆ ಆಗಮಿಸಿದ ಘನತೆವೆತ್ತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಘನತೆವೆತ್ತ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಶಾಸಕರಾದ ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಉಪಸ್ಥಿತರಿದ್ದರು. ಇಂದು ಪ್ರವಾಸದ ವೇಳೆ ಅವರು, ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ ಅರಣ್ಯ ಕಾಲೇಜಿಗೆ ಭೇಟಿ ನೀಡಲಿದ್ದು, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
