ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಇಂದು ಸಂಜೆ 5.30ರ ಸುಮಾರಿಗೆ ಆಲಿಕಲ್ಲು ಮಳೆ ಸುರಿದಿದ್ದು, ಬಿಸಿಲಿಗೆ ಬಳಲಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.
ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣದಿಂದ ಕೂಡಿದ್ದ ನಗರದಲ್ಲಿ ಸಂಜೆ ಇದ್ದಕ್ಕಿದ್ದಂತೆ ಮಳೆ ಸುರಿಯಲು ಆರಂಭವಾಯಿತು. ಆಲಿಕಲ್ಲು ಸಹಿತ ಮಳೆಯಿಂದಾಗಿ ಚಿಣ್ಣರು ಮಳೆಯಲ್ಲಿ ಕುಣಿದು ಆಲಿಕಲ್ಲು ಆರಿಸಿಕೊಳ್ಳುತ್ತಿರುವ ದೃಶ್ಯಗಳು ಕಂಡುಬಂದವು.