ಈದ್ಗಾ ಮೈದಾನದಲ್ಲಿ ಸಾಮೂಹಿಕ ವಿಶೇಷ ಪ್ರಾರ್ಥನೆ
ಹುಬ್ಬಳ್ಳಿ : ಹುಬ್ಬಳ್ಲಿ – ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಾದ್ಯಂತ ರಂಜಾನ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಯಿತು.
ಹಳೆಯ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ಮುಸ್ಲಿಮರು ಸಾಮೂಹಿಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ 10 ಗಂಟೆಗೆ ಕಿತ್ತೂರ ಚನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಸಾಮೂಹಿಕ ಪ್ರಾರ್ಥನೆ ಹಿನ್ನೆಲೆಯಲ್ಲಿ ಕಿತ್ತೂರು ಚನ್ನಮ್ಮ ವೃತ್ತ ಬಳಸಿ ಸಂಚರಿಸುವ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ , ಲೊಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ, ಶಾಸಕ ಪ್ರಸಾದ ಅಬ್ಬಯ್ಯ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಹಬ್ಬದ ನಿಮಿತ್ತ ಮುಸ್ಲಿಮರಿಗೆ ಶುಭಾಶಯ ಕೋರಿದರು.
ಅಂಜುಮನ್ ಇ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎ.ಎ. ಹಿಂಡಸಗೇರಿ ಸೇರಿದಂತೆ ಮುಸ್ಲಿಂ ಸಮುದಾಯದ ಹಲವಾರು ಗಣ್ಯರು ಸಾಮೂಹಿಕ ಪ್ರಾರ್ಥನೆ ಮಾಡಿದರು.
