ಹುಬ್ಬಳ್ಳಿ : ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲಿದೆ.
ವಿವರಗಳು ಈ ಕೆಳಗಿನಂತಿವೆ: ಡಿಸೆಂಬರ್ ೨೬, ೨೦೨೪ (ಗುರುವಾರ) ರಂದು ಎಕ್ಸಪ್ರೆಸ್ ಹುಬ್ಬಳ್ಳಿ-ಪ್ರಯಾಗ್‌ರಾಜ್ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ ೦೭೩೬೯) ರೈಲು ಹುಬ್ಬಳ್ಳಿಯಿಂದ ೧೧:೦೦ ಗಂಟೆಗೆ ಹೊರಟು, ಶನಿವಾರ ೦೩:೦೦ ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದ್‌ನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬಾನಾಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ರೈಲು ಹನ್ನೊಂದು ಸ್ಲೀಪರ್ ಕ್ಲಾಸ್, ಏಳು ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎಸ್‌ಎಲ್‌ಆರ್‌ಡಿ ಸೇರಿದಂತೆ ಒಟ್ಟು ೨೦ ಬೋಗಿಗಳನ್ನು ಹೊಂದಿರುತ್ತದೆ.
ಈ ರೈಲಿನ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ ಭೇಟಿ ನೀಡಿ, ೧೩೯ ನಂಬರ್ ಗೆ ಡಯಲ್ ಮಾಡಿ ಅಥವಾ ಎನ್‌ಟಿಇಎಸ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಮಾಹಿತಿ ಪಡೆಯಬಹುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.