ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ನಟಿ ಸಾರಾ ಅಲಿ ಖಾನ್ ಭೇಟಿ

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿ ಖಾನ್ ನಗರದ ಉಣಕಲ್​ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿಯಾಗಿದ್ದಾರೆ.

ಈ ಕುರಿತಂತೆ ಹುಬ್ಬಳ್ಳಿಯ ಶಾಸಕ‌ ಮಹೇಶ್​ ಟೆಂಗಿನಕಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸರಾ ಅಲಿಖಾನ್ ಅವರು ಭೇಟಿ ನೀಡಿದ ವಿಷಯ ತಿಳಿದು ಸಂತೋಷವಾಗಿದೆ. ಇಂತಹ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡಿದಾಗ ನಮ್ಮ ದೇಶದ ಸಂಸ್ಕೃತಿ ಹಾಗೂ ಪರಂಪರೆ ಎಲ್ಲೆಡೆ ಪಸರಿಸುವುದಲ್ಲದೇ,ನಮ್ಮ ನಗರವು ಪ್ರವಾಸಿ ತಾಣವಾಗಿ ಬಿಂಬಿತಗೊಳ್ಳುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ ಎಂದಿದ್ದಾರೆ.