ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠ ಇಂದು (ಮೇ 29) ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.