ಹುಬ್ಬಳ್ಳಿ: ರೌಂಡ್ ಟೇಬಲ್ ಇಂಡಿಯಾ ಪ್ರಾಯೋಜಿಸಿದ್ದ ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆಯಲ್ಲಿನ NICU ಘಟಕವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ ಮಾಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿರು ಅವರು ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ಆಸ್ಪತ್ರೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿರುವ ಚಿಟಗುಪ್ಪಿ ಸರ್ಕಾರಿ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗಳಷ್ಟೇ ಸ್ವಚ್ಛತೆ ಹಾಗೂ ಸೇವೆ ಒದಗಿಸಿ ಬಡರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ ಎಂದರು.