ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ 6 ಲೈನ್ ಬೈಪಾಸ್ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಡೆಸಿದರು,
ಬೈಪಾಸ್ ರಸ್ತೆ 6 ಲೈನ್ ಅಗಲೀಕರಣವು ಅವಳಿನಗರದ ಜನರ ಬಹುದಿನಗಳ ಬೇಡಿಕೆಯಾಗಿದೆ. 33 ಕಿಮೀ ದೂರದ ರಸ್ತೆ ಅಗಲಿಕರಣ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದ್ದು, ಹಂತ ಹಂತವಾಗಿ ವಾಹನ ಸಂಚಾರಕ್ಕೆ ಅನುವು ಮಾಡಲಾಗುತ್ತಿದೆ, ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಠಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು,ಧಾರವಾಡ ಭಾಗಿಯಾಗಿದ್ದರು.