ಹುಬ್ಬಳ್ಳಿ : ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸೇವೆಯನ್ನು ಪುನರಾರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 26, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 12, 2025 ರಿಂದ ಜೂನ್ 28, 2025 ರವರೆಗೆ ಪುನರಾರಂಭಿಸಲಾಗುತ್ತದೆ.
ರೈಲು ಸಂಖ್ಯೆ 07356 ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 27, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 13, 2025 ರಿಂದ ಜೂನ್ 29, 2025 ರವರೆಗೆ ಪುನರಾರಂಭಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.