ಹುಬ್ಬಳ್ಳಿ ಹೊರವಲಯದಲ್ಲಿ ಅಪಘಾತ: ಇಬ್ಬರು ಯುವಕರ ಸಾವು

0
30

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಹುಬ್ಬಳ್ಳಿಯ ಹೊರವಲಯದ ಪೂನಾ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಆನಂದ ನಾಯಕರ(34), ಈರಣ್ಣ ಬಡಿಗೇರ (36) ಮೃತಪಟ್ಟಿದ್ದಾರೆ‌‌. ಮೃತರು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಆಸ್ತಕಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ.ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Previous articleಮನವಿ ಪತ್ರ ಕಸದ ಬುಟ್ಟಿಗೆ: ಮುಖ್ಯಮಂತ್ರಿ ರಾಜೀನಾಮೆಗೆ ಜೋಶಿ ಆಗ್ರಹ
Next article6 ತಿಂಗಳ ಹಿಂದೆ ಮೃತ ಅಧಿಕಾರಿಗೆ ವರ್ಗಾವಣೆ…