ಹುಬ್ಬಳ್ಳಿ: ನಗರದ ಭೈರಿದೇವರಕೋಪ್ಪದ 11 ತಿಂಗಳ ಮಗುವಿನಲ್ಲಿ ಕೋವಿಡ್ ಪತ್ತೆ ಆಗಿದ್ದು, ದೃಢಪಟ್ಟಿದೆ.
ಮಗುವಿಗೆ ಹೃದಯ ಕಾಯಿಲೆ ಇದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಯಾವುದೇ ಟ್ರಾವೆಲ್ಸ್ ಹಿಸ್ಟ್ರಿ ಇಲ್ಲ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಸಾಧ್ಯವಾದಷ್ಟು ಜನಸಂದಣಿಯಿಂದ ದೂರ ಇರುವಂತೆ, ಮನೆಯಿಂದ ಹೊರಹೋಗುವಾಗ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಹಾಗೂ ಗರ್ಭಿಣಿಯರು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.