ಕೊಪ್ಪಳ: ತಾಲ್ಲೂಕಿನ ಹುಲಿಗಿಯ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಬುಧವಾರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಹುಲಿಗೆಮ್ಮನ ದರ್ಶನ ಪಡೆದರು.
ಹುಲಿಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಸಚಿವರಾದ ಬಂಡೆಪ್ಪ ಕಾಶಂಪೂರ, ವೆಂಕಟರಾವ್ ನಾಡಗೌಡ್ರು, ಹಾಲ್ಕೋಡ್ ಹನುಮಂತಪ್ಪ, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ, ಯುವ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ್, ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಇದ್ದರು.