ಕೊಪ್ಪಳ: ತಾಲ್ಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಸೋಮವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
ಹುಲಿಗೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದು, ತಾಯಿಯ ಕೃಪೆಗೆ ಪಾತ್ರರಾದರು.
ಸಂಸದ ಕೆ.ರಾಘವೇಂದ್ರ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಜನಾರ್ಧನ ಹುಲಿಗಿ ಇದ್ದರು.