ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವು

0
14

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.
ಏಳನೇ ತರಗತಿ ವಿದ್ಯಾರ್ಥಿನಿ 13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ. ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

Previous articleಬೆಳಗಾವಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿತ
Next articleಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ