ಹೆಗಡೆ ಸಂಸದಕ್ಕೆ ಲಾಯಕ್ಕಿಲ್ಲ

0
14

ಹುಬ್ಬಳ್ಳಿ: ಸಂಸದ ಅನಂತ ಕುಮಾರ್ ಹೆಗಡೆಯವರು ಇಂಥ ರಾಜ್ಯ ಸರ್ಕಾರದ ಬಗ್ಗೆ ಹಿಗ್ಗಾಮುಗ್ಗಾ ಟೀಕಿಸಿ ದರಿದ್ರ ಸರ್ಕಾರ ಎಂದಿದ್ದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಅನಂತ ಕುಮಾರ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಈ ಸಂವಿಧಾನ ಬದಲಾಯಿಸಲು ಎಂದವರು. ಅವರು ಲೋಕಸಭಾ ಸದಸ್ಯರಾಗಲು ಲಾಯಕ್ಕೇ? ಎಂದು ಪ್ರಶ್ನಿಸಿದರು. ಅಂಥವರು ಹೇಳಿಕೆ ನೀಡಿದರೆ ಯಾವ ಕಿಮ್ಮತ್ತು ಇಲ್ಲ. ಅಮೆರಿಕದ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ತು ಮತ್ತು ನ್ಯಾಯಾಲಯಗಳಿಗೆ ಜನರೇ ಮಾಲೀಕರು. ಸಂವಿಧಾನ ಕಿತ್ತೊಗೆಯಿರಿ ಎನ್ನುವವರನ್ನೇ ಕಿತ್ತೊಗೆಯಿರಿ ಎಂದು ಹೇಳಿದ್ದರು ಎಂದರು. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಲೋಕಸಭಾ ಸದಸ್ಯರಾಗಲು ಲಾಯಕ್ಕಿಲ್ಲ ಎಂದು ಖಾರವಾಗಿ ಹೇಳಿದರು.

Previous articleಸಿದ್ರಾಮುಲ್ಲಾಖಾನ್‌ ಸರ್ಕಾರ ದಿವಾಳಿಯಾಗಿಬಿಟ್ಟಿದೆ
Next articleವಿಜೃಂಭಣೆಯಿಂದ ನೆರವೇರಿದ ಉಳವಿ ಜಾತ್ರೆ