Home ತಾಜಾ ಸುದ್ದಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಹೈಟೆಕ್ ಆಸ್ಪತ್ರೆಯಿಂದ ಬೆಂಗಳೂರಿಗೆ ಲಮಾಣಿ ಶಿಫ್ಟ್

ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಹೈಟೆಕ್ ಆಸ್ಪತ್ರೆಯಿಂದ ಬೆಂಗಳೂರಿಗೆ ಲಮಾಣಿ ಶಿಫ್ಟ್

0

ದಾವಣಗೆರೆ: ಚಿತ್ರದುರ್ಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ದಾವಣಗೆರೆ ಎಸ್.ಎಸ್. ಹೈಟೆಕ್ ಆಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಗುರುವಾರ ಬಜೆಟ್ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ದಾವಣಗೆರೆ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಇದೀಗ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.

ಲಮಾಣಿ ಅವರು ಬಜೆಟ್ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಸ್ವಕ್ಷೇತ್ರ ಹಾವೇರಿಗೆ ತೆರಳುವ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮಾರ್ಗಮಧ್ಯೆ ಎಳನೀರು ಕುಡಿಯಲೆಂದು ಕಾರನ್ನು ಪಕ್ಕಕ್ಕೆ ಹಾಕಿ ಇಳಿದಿದ್ದಾರೆ. ಅದೇ ವೇಳೆ ವೇಗವಾಗಿ ಬಂದ ಬೈಕ್‌ವೊಂದು ರುದ್ರಪ್ಪ ಲಮಾಣಿ ಅವರಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಅವರು ಕುಸಿದು ಬಿದ್ದು, ಗಾಯಗೊಂಡಿದ್ದರು. ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

Exit mobile version