ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ: ಸಿಎಂ

0
15

ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಉತ್ತರಿಸಿ, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದರು.

Previous articleಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ: ಆಸ್ಟ್ರೇಲಿಯಕ್ಕೆ ಆಹ್ವಾನ
Next articleಪಂಚಮಸಾಲಿ ಮೀಸಲಾತಿ: ಡಿ. 5ರಂದು ಸರ್ವಪಕ್ಷ ಶಾಸಕರ ಸಭೆ