Home ತಾಜಾ ಸುದ್ದಿ ಹೆಚ್ಚುವರಿ ರೈಲು ಸೇವೆ ಒದಗಿಸಲು ಮನವಿ

ಹೆಚ್ಚುವರಿ ರೈಲು ಸೇವೆ ಒದಗಿಸಲು ಮನವಿ

0

ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರ ಬರೆದಿದ್ದಾರೆ.
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ.
ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು-ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯತೆಯಿದ್ದು. ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿನಂತಿಸಿದ್ದಾರೆ.

Exit mobile version