Home ನಮ್ಮ ಜಿಲ್ಲೆ ಗದಗ ಹೆಚ್.ಕೆ.ಪಾಟೀಲರ ಆಸಕ್ತಿಯಿಂದಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ

ಹೆಚ್.ಕೆ.ಪಾಟೀಲರ ಆಸಕ್ತಿಯಿಂದಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ

0
167

ಗದಗ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯಕ್ಕೆ ಚಾಲನೆ ನೀಡಿ, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರ ರಚನೆ ಮಾಡಿದೆ. ಚಾಲುಕ್ಯರ ಕಾಲದಲ್ಲಿ ದೇವಸ್ಥಾನ, ಕೋಟೆಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ. ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು. ಇದರಿಂದ ಇತಿಹಾಸದ ಬಗ್ಗೆ ಜ್ಞಾನ ಮತ್ತು ನಾಡಿನ ಬಗ್ಗೆ ಹೆಮ್ಮೆಯ ಭಾವನೆ ಬೆಳೆಸಿಕೊಳ್ಳಲು ನೆರವಾಗಲಿದೆ.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.