ಹೆಣ್ಣು ಮಕ್ಕಳ ಬದುಕಿಗೆ ಮೊದಲು ಗ್ಯಾರೆಂಟಿ ನೀಡಿ

0
9

ಬೆಂಗಳೂರು: ಸಾವಿರಾರು ಹೆಣ್ಣು ಕಂದಮ್ಮಗಳ ಹತ್ಯೆಯ ಹಿಂದಿರುವ ಭ್ರೂಣ ಲಿಂಗ ಪತ್ತೆ ಜಾಲವನ್ನ ಬೇಧಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ ಯಾರನ್ನು ರಕ್ಷಣೆ ಮಾಡಲು ಹೊರಟಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕಳೆದ ವರ್ಷ ಡಿಸೆಂಬರ್ ನಲ್ಲಿ ಈ ಜಾಲ ಬೆಳಕಿಗೆ ಬಂದಾಗ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಜಾಲವನ್ನ ಪತ್ತೆ ಹಚ್ಚಿ ದುಷ್ಕರ್ಮಿಗಳನ್ನು ಬಂಧಿಸಲು SIT ರಚನೆ ಮಾಡಬೇಕು, ಆರೋಪಿಗಳನ್ನು ತ್ವರಿತವಾಗಿ ವಿಚಾರಣೆ ಮಾಡಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲು ವಿಶೇಷ ಕೋರ್ಟ್ ರಚಿಸಬೇಕು ಎಂದು ಕಳೆದ ಬೆಳಗಾವಿ ಅಧಿವೇಶದಲ್ಲಿ ಕರ್ನಾಟಕ ಬಿಜೆಪಿ ಎಷ್ಟೇ ಒತ್ತಡ ಹೇರಿದರೂ ಸರ್ಕಾರ ಈ ಪ್ರಕರಣವನ್ನ ಸಿಐಡಿ ತನಿಖೆಗೆ ಒಪ್ಪಿಸಿತು. ಭ್ರೂಣ ಪತ್ತೆ – ಹತ್ಯೆಯ ಜಾಲ ಸಿಐಡಿ ತನಿಖೆಗೆ ಒಪ್ಪಿಸಿ ಈಗ ಒಂದು ತಿಂಗಳು ಕಳೆದರೂ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲದಿರುವುದನ್ನು ಗಮನಿಸಿದರೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಯಾರನ್ನೋ ರಕ್ಷಣೆ ಮಾಡಲು, ಪ್ರಕರಣವನ್ನು ಮುಚ್ಚಿ ಹಾಕಲು ಹೊಂಚು ಹಾಕುತ್ತಿರುವಂತಿದೆ. ಮಹಿಳಾ ಸಬಲೀಕರಣ ಅಂದರೆ ಚುನಾವಣೆ ಗೆಲ್ಲಲು, ಮಹಿಳೆಯರ ವೋಟು ಪಡೆಯಲು ಹೆಣ್ಣು ಮಕ್ಕಳ ಮೂಗಿಗೆ ತುಪ್ಪ ಸವರುವ ಗ್ಯಾರೆಂಟಿ ನೀಡುವುದಲ್ಲ ಸಿಎಂ ಸಿದ್ದರಾಮಯ್ಯನವರೇ, ಹೆಣ್ಣು ಮಕ್ಕಳ ಬದುಕಿಗೆ ಮೊದಲು ಗ್ಯಾರೆಂಟಿ ನೀಡಿ. ಹೆಣ್ಣು ಕಂದಮ್ಮಗಳು ಭೂಮಿಗೆ ಕಾಲಿಡುವ ಮುನ್ನವೇ ಜೀವ ತೆಗೆಯುವ, ಕಣ್ಣು ಬಿಡುವ ಮುನ್ನವೇ ಪ್ರಾಣ ಕಸಿಯುವ ಭ್ರೂಣ ಪತ್ತೆ-ಹತ್ಯೆ ಜಾಲವನ್ನ ಬೇಧಿಸಿ ಈ ದಂಧೆಯನ್ನ ನಿಲ್ಲಿಸುವ ಕೆಲಸ ಮಾಡಿ ಎಂದಿದ್ದಾರೆ.

Previous articleಸಿಎಂ ವಿರುದ್ಧ ಪ್ರಾಸಿಕ್ಯೂಷನ್: 19ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಕರೆ
Next article೧ ಗಂಟೆಯಲ್ಲಿ ೧೭ ಜನರ ಮೇಲೆ ಬೀದಿ ನಾಯಿ ದಾಳಿ