Home ತಾಜಾ ಸುದ್ದಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ ಸಿಟಿ ರವಿ: ಸದನದಲ್ಲಿ ಕೋಲಾಹಲ

ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಸಿದ ಸಿಟಿ ರವಿ: ಸದನದಲ್ಲಿ ಕೋಲಾಹಲ

0

ಬೆಳಗಾವಿ: ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕಾಂಗ್ರೆಸ್ ನಾಯಕರು ಸಿ.ಟಿ. ರವಿ ವಿರುದ್ಧ ಆಕ್ರೋಶಗಗೊಂಡಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಬಿಗಿಪಟ್ಟು ಹಿಡಿದಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ, ಅಮಿತ್‌ ಶಾ ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ ಇಂದು ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನನ್ನ ವಿರುದ್ಧ ಸಿ.ಟಿ. ರವಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದು, ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ.

Exit mobile version