Home ತಾಜಾ ಸುದ್ದಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

0
132

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆಯ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಈ ವೇಳೆ ಜೊತೆಗಿದ್ದರು.