ಹೆಬ್ಬಾಳ್ ಟೋಲ್‌ನಲ್ಲಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ

0
30

ದಾವಣಗೆರೆ: ನಿಂತಿದ್ದ ಕಾರಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಕಾರು ನಜ್ಜುಗುಜ್ಜಾಗಿರುವ ಘಟನೆ ತಾಲೂಕಿನ ಹೆಬ್ಬಾಳು ಟೋಲ್ ಗೇಟ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ.
ತಾಲೂಕಿನ ಹೆಬ್ಬಾಳು ಟೋಲ್ ಗೇಟ್‌ನಲ್ಲಿ ನಿಂತಿದ್ದ ಕಾರಿಗೆ ಇಂದಿನಿಂದ ಬಂದು ಲಾರಿ ಡಿಕ್ಕಿ ಹೊಡೆದಿದ್ದು ಕಾರು ಚಾಲಕ ಸಿನಿಮಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಲಾರಿ ಕಾರಿಗೆ ಡಿಕ್ಕಿ ಹೊಡೆದಿರುವುದನ್ನು ನೋಡಿದರೆ, ಕಾರಿನಲ್ಲಿದ್ದವರು ಒಬ್ಬರು ಬದುಕು ಸ್ಥಿತಿಯಲಿಲ್ಲ ಎಂಬಂತೆ ಕಾಣುತ್ತದೆ. ಆದರೆ ಕಾರಿನಲ್ಲಿ ಎಷ್ಟು ಜನ ಇದ್ದರು, ಅವರು ಬದುಕಿದ್ದರಾ ಅಥವಾ ಉಳಿದಿದ್ದರ ಎಂಬ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Previous articleಸಚಿವೆ ಕಾರು ಅಪಘಾತ: ಬೆಳಕಿಗೆ ಬಂದ ಸತ್ಯ
Next articleಮನೆ ಗೋಡೆ ಕುಸಿದು ರೈತ ಸ್ಥಳದಲ್ಲೇ ಸಾವು