ಉತ್ತರಾಖಂಡ: ಹೆಲಿಕಾಪ್ಟರ್ ಪತನಗೊಂಡು ಐವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರಕಾಶಿ ಜಿಲ್ಲೆಯ ಗಂಗಾ ನದಿಯ ಮೂಲ ತೊರೆಗಳಲ್ಲಿ ಒಂದಾದ ಗಂಗೋತ್ರಿ ಕಡೆಗೆ ಹೊರಟಿದ್ದ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಪ್ರವಾಸಿಗರು ಇದ್ದರು ಎನ್ನಲಾಗಿದೆ, ಈ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ.