ಉತ್ತರಾಖಂಡ: ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಲ್ಲಿನ ಗೌರಿಕುಂಡದ ಬಳಿ ಪತನಗೊಂಡದ್ದು, ಘಟನೆಯಲ್ಲಿ ಪೈಲಟ್ ಸೇರಿ ಅದರಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ.
ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನವರು. ಪರಿಹಾರ ಮತ್ತು ರಕ್ಷಣಾ ಕಾರ್ಯದ ದೃಷ್ಟಿಯಿಂದ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಘಟನೆಯ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (ಯುಸಿಎಡಿಎ) ತಿಳಿಸಿದೆ.
ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಇತರ ಸಂಸ್ಥೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಘಟನೆ ವೇಳೆ ಹೆಲಿಕಾಪ್ಟರ್ ನಲ್ಲಿ ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.