ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳ ಬಳಿಕ ಕೊನೆಗೂ ಹೆಸ್ಕಾಂ ಇಲಾಖೆಗೆ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಾಜಿ ಶಾಸಕ ಸೈಯ್ಯದ್ ಅಜ್ಜಂಪೀರ್ ಖಾದ್ರಿ ಅವರನ್ನು ಹೆಸ್ಕಾಂ ಅಧ್ಯಕ್ಷರನ್ನಾಗಿ ಸರ್ಕಾರ ಘೋಷಣೆ ಮಾಡಿದ್ದು, ಅವರು ಶುಕ್ರವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶುಕ್ರವಾರ ಮಧ್ಯಾಹ್ನ ೩.೩೦ಕ್ಕೆ ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.