ಹೇಮಾವತಿ ಯೋಜನೆ: ಎರಡು ಜಿಲ್ಲೆಗಳ ನಡುವೆ ಕಂದಕ ಸೃಷ್ಟಿ

0
6

ಬೆಂಗಳೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯ ವಿಷಯವಾಗಿ ಕಳೆದ ಕೆಲ ದಿನಗಳಿಂದ ಸಾಕಷ್ಟು ವಿವಾದ ಸೃಷ್ಟಿಯಾಗಿರುವುದು ವಿಷಾದಕರ ಬೆಳವಣಿಗೆಯಾಗಿದೆ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಹೇಮಾವತಿ ಲಿಂಕ್ ಕೆನಾಲ್ ಫೀಡರ್ ಯೋಜನೆಯ ವಿಷಯದಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಎರಡು ಜಿಲ್ಲೆಗಳ ನಡುವೆ ಕಂದಕ ಸೃಷ್ಟಿಯಾಗಿರುವುದು ಅತ್ಯಂತ ವಿಷಾದಕರ ಬೆಳವಣಿಗೆಯಾಗಿದೆ. ಈ ಹಿನ್ನಲೆ ಎರಡೂ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು ಮತ್ತು ನೀರಾವರಿ ತಜ್ಞರ ಸಭೆ ಕರೆದು ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಅವಲೋಕಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Previous articleಶಾಲೆಯ ಪದಾಧಿಕಾರಿಗಳಿಗೆ ನೀಡಿರುವ ನೋಟೀಸ ಕೂಡಲೇ ಹಿಂಪಡೆಯಿರಿ
Next article108 ವರ್ಷಗಳ ಇತಿಹಾಸದಲ್ಲೇ ಸಾರ್ವಕಾಲಿಕ ಸಾಧನೆ!