Home ತಾಜಾ ಸುದ್ದಿ ಹೈಕಮಾಂಡ್ ಈಗ ಲೋ ಕಮಾಂಡ್ ಆಗಿದೆ

ಹೈಕಮಾಂಡ್ ಈಗ ಲೋ ಕಮಾಂಡ್ ಆಗಿದೆ

0

ಬೆಂಗಳೂರು: ಸಿದ್ದರಾಮಯ್ಯ ಅವರ ಪ್ರಭಾವ ಇಲ್ಲದೆ ಮುಡಾ ಸೈಟುಗಳನ್ನು ಪಡೆಯಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಈಗ ಲೋ ಕಮಾಂಡ್ ಆಗಿದೆ. ಸೋನಿಯಾ, ರಾಹುಲ್, ಪ್ರಿಯಾಂಕ, ರಾಬರ್ಟ್ ವಾದ್ರಾ ಎಲ್ಲರೂ ಬೇಲ್ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಆರ್ಥಿಕ ಅಪರಾಧದಲ್ಲಿ ಇರುವುದರಿಂದಲೇ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನ ಹೈಕಮಾಂಡ್ ನಾಯಕರೇ ಜಾಮೀನಿನ ಮೇಲೆ ಹೊರಗಿರುವಾಗ ಅವರು ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಿ ಎಂದು ಹೇಳಲು ಸಾಧ್ಯವೇ? ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದಲ್ಲಿ ತಮ್ಮ ಭಂಡತನ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದರು.

ಯತ್ನಾಳ್ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ : ಯತ್ನಾಳ್ ಅವರು ಪಕ್ಷದ ನೀತಿ ನಿರೂಪಣೆಗೆ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರು ಪಕ್ಷದ ಶಾಸಕರು. ನಿಮ್ಮ ಹೈಕಮಾಂಡ್‌ಗೆ ಕ್ರಮ ಕೈಗೊಳ್ಳುವ ಶಕ್ತಿ ಇಲ್ಲವೇ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು. ಪಕ್ಷದ ವೇದಿಕೆಯಲ್ಲೇ ಎಲ್ಲವನ್ನೂ ಚರ್ಚಿಸಬೇಕು. ಯಾರೂ ಬಹಿರಂಗ ಹೇಳಿಕೆ ಕೊಡುವುದು ಸರಿಯಲ್ಲ ಎಂದರು.

Exit mobile version