Home ತಾಜಾ ಸುದ್ದಿ ಹೈಕಮಾಂಡ್ ನಿರ್ಧಾರ ಅಂತಿಮ

ಹೈಕಮಾಂಡ್ ನಿರ್ಧಾರ ಅಂತಿಮ

0

ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಂಸದ ಜಗದೀಶ್ ಶೆಟ್ಟರ ಹೇಳಿದರು.
ಮಂಗಳವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದ್ದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಕಳೆದೊಂದು ವರ್ಷದಿಂದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಂಡಿದೆ ಎಂದರು.
ರಾಜ್ಯದಲ್ಲಿ ಪ್ರತಿ ನಿತ್ಯ ಬೆಲೆ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಏ. 5ರಿಂದ ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಸಿದ್ದರಾಮಯ್ಯನವರು ಆಡಳಿತದ ಹಿಡಿತ ಕಳೆದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದು ವಾಗ್ದಾಳಿ ನಡೆಸಿದರು.
ಸಚಿವ ರಾಜಣ್ಣ ಅವರು 48 ಶಾಸಕರು ಹನಿ ಟ್ರ್ಯಾಪ್‌ಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಒಳಜಗಳ ಪ್ರಾರಂಭವಾಗಿದೆ. ಸಿದ್ದರಾಮಯ್ಯ ಅವರು ತಾವು ಪೂರ್ಣ ಪ್ರಮಾಣದಲ್ಲಿ ಸಿಎಂ ಆಗಬೇಕೆಂದು ಬಯಸಿದ್ದರೆ, ಡಿ.ಕೆ. ಶಿವಕುಮಾರ ಅವರು ಸಿಎಂ ಆಗಲು ದೆಹಲಿ ಯಾತ್ರೆ ನಡೆಸಿದ್ದಾರೆ. ಎಲ್ಲರೂ ಸರ್ಕಾರ ಪತನದ ಭೀತಿಯಲ್ಲಿದ್ದಾರೆ ಎಂದು ಶೆಟ್ಟರ ವ್ಯಂಗ್ಯವಾಡಿದರು.

Exit mobile version