Home ತಾಜಾ ಸುದ್ದಿ ಹೈಕಮಾಂಡ್ ಹಿಡಿದು ಎಲ್ರೂ ಸಿಎಂ ಸಿದ್ದರಾಮಯ್ಯ ಬೆನ್ನಿಗಿದ್ದೇವೆ

ಹೈಕಮಾಂಡ್ ಹಿಡಿದು ಎಲ್ರೂ ಸಿಎಂ ಸಿದ್ದರಾಮಯ್ಯ ಬೆನ್ನಿಗಿದ್ದೇವೆ

0
ಹೈಕಮಾಂಡ್ ಹಿಡಿದು ಎಲ್ರೂ ಸಿಎಂ ಸಿದ್ದರಾಮಯ್ಯ ಬೆನ್ನಿಗಿದ್ದೇವೆ

ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನಿಸುತ್ತಿದ್ದಾರೋ ಅದು ಅವರ ವೈಯಕ್ತಿಕ ವಿಚಾರ. ಬಿಟ್ಟರೆ, ಪಕ್ಷದ ಹಂತದಲ್ಲಿ ಯಾವುದೇ ರೀತಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ. ಹೈಕಮಾಂಡ್‌ನಿಂದ ಹಿಡಿದು ಎಲ್ಲರೂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯ ಪಟ್ಟರು.
ಕಿತ್ತೂರಿನಲ್ಲಿ ಸುದ್ದಿಗಾರರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ನಾಯಕರು ಭೇಟಿ ಆಗುತ್ತಿರುವ ವಿಚಾರಕ್ಕೆ ಪ್ರಶ್ನೆ ಮಾಡಿದಾಗ ಪ್ರತಿಕ್ರಿಯಿಸಿದ ಅವರು, ಅದೆಲ್ಲಾ ಅವರವರ ಪ್ರಯತ್ನ, ಆಸೆ. ಅದು ಅವರಿಗೆ ಬಿಟ್ಟಿದ್ದು. ಆಸೆ ಎಲ್ಲರಿಗೂ ಇದ್ದೇ ಇರುತ್ತೆ. ಅದು ತಪ್ಪು ಏನೂ ಅಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರು ಪಕ್ಷದ ಉನ್ನತ ಮಟ್ಟದಲ್ಲಿದ್ದಾರೆ. ಇವರೆಲ್ಲಾ ನಾವು ಸಿಎಂ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಮತ್ತು ಕಲ್ಪನೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಜೊತೆಗಿದೆ. ಇದರಲ್ಲಿ ವ್ಯಯಕ್ತಿಕವಾಗಿ ನನಗೆ ನೂರಕ್ಕೆ ನೂರು ಭರವಸೆ ಇದೆ ಎಂದರು.