Home ತಾಜಾ ಸುದ್ದಿ ಹೈಕೋರ್ಟ್‌ಗೆ ಧನ್ಯವಾದ ಸಲ್ಲಿಸಿದ ಡಿಕೆಶಿ

ಹೈಕೋರ್ಟ್‌ಗೆ ಧನ್ಯವಾದ ಸಲ್ಲಿಸಿದ ಡಿಕೆಶಿ

0

ಬೆಂಗಳೂರು: ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಕೋರ್ಟ್ ಆದೇಶದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನನ್ನ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್‌ಗೆ ಧನ್ಯವಾದಗಳು. ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ. ಅದೇ ಕಾರಣಕ್ಕೆ ನನಗೆ ತೊಂದರೆ ನೀಡಿದ್ದಾರೆ ಅದರ ಪರಿಣಾಮ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಸಮಯದಲ್ಲಿ ಯಾರು ಏನು ಮಾತನಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ, ಎಲ್ಲರಿಗೂ ಒಳ್ಳೆಯದಾಗಲಿ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Exit mobile version