ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯಿಲಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್, ಹೈಕೋರ್ಟ್ ನ್ಯಾಯಮೂರ್ತಿಗಳು, ವಕೀಲರು ಹಾಗೂ ಇತರ ಗಣ್ಯರು ಇದ್ದರು.