ಹೊತ್ತಿ ಉರಿದ ಕಾರು: ಚಾಲಕ ಪಾರು

0
19

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸುಟ್ಟು ಭಸ್ಮವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹೊರವಲಯದಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ವೇಳೆ ಹಿರಿಯೂರು ನಗರದ ವಿವಿ ಸಾಗರ ರಸ್ತೆ ಬಳಿಯ ಹೆದ್ದಾರಿಯಲ್ಲಿ ನಡೆದ ಘಟನೆ ಘಟನೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಳ್ಳುವ ಮುನ್ನ ಹೊಗೆಯಿಂದಾಗಿ ಎಚ್ಚೆತ್ತ ಕಾರಿನ ಚಾಲಕ ರಸ್ತೆಬದಿಗೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ.
ಸುಟ್ಟು ಹೋದ ಕಾರು ಹೊನ್ನಾಳ್ಳಿ ಮೂಲದ ರಮೇಶ್ ಆಚಾರಿ ಎನ್ನುವವರಿಗೆ ಸೇರಿದ್ದು, ಕಾರಿನಿಂದ ಇಳಿದ ಪರಿಣಾಮ, ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ವಿಷಯ ತಿಳಿಸಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರೂ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಹಿರಿಯೂರು ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Previous articleದಟ್ಟ ಮಂಜಿಗೆ ಎರಡು ಅಪಘಾತ: ಒಂದೇ ಕುಟುಂಬದ ನಾಲ್ವರು ಬಲಿ
Next articleಆರ್​ಸಿಬಿ ಕನ್ನಡಿಗರನ್ನು ನಿರ್ಲಕ್ಷಿಸುತ್ತಿದೆ