ಬೆಂಗಳೂರು: ಹೊಸೂರು ಸಮೀಪದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಮಿಳುನಾಡಿನ ಕೃಷ್ಣಗಿರಿಯ ವನ್ನಿಯಾಪುರಂ ಪ್ರದೇಶದಲ್ಲಿ ಟಾಟಾ ಕಂಪನಿ ಟಾಟಾ ಎಲೆಕ್ಟ್ರಾನಿಕ್ಸ್ ಒಡೆತನದ ಸೆಲ್ ಫೋನ್ ಬಿಡಿಭಾಗಗಳ ತಯಾರಿಕಾ ಕಾರ್ಖಾನೆಯಲ್ಲಿ ಶುದ್ಧೀಕರಣ ಕಾರ್ಯದ ವೇಳೆ ಬೆಂಕಿ ಕಾಣಿಸಿಕೊಂಡಿದೆ, ಅಗ್ನಿ ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ರಾಯಕೋಟೆ ಮತ್ತು ಡೆಂಕಣಿಕೋಟೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ರಾಯಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಅಗ್ನಿ ಅವಘಡದಿಂದಾಗಿ ಇಂದು ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ರಜೆ ಘೋಷಿಸಲಾಗಿದೆ.