ಹೊಸ ವರ್ಷ ಸಂಭ್ರಮದ ಆಚರಣೆ: ಕಾರು ಡಿಕ್ಕಿ ಹೊಡೆದು ಯುವಕ ಸಾವು

0
43

ದಾವಣಗೆರೆ:  ಹೊಸ ವರ್ಷ ಸಂಭ್ರಮದ ಆಚರಣೆಯಲ್ಲಿ ತೊಡಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.
ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ (25) ಮೃತಪಟ್ಟ ಯುವಕ. ದಾವಣಗೆರೆಯ ನೂತನ ಕಾಲೇಜು ರಸ್ತೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು, ಇನ್ನೊಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರ್ತಿಕ್ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಕಾರ್ತಿಕ್ ಮೃತಪಟ್ಟಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆಯುತ್ತಿದ್ದಂತೆ  ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಜಖಂ ಗೊಂಡಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕೃಪಾಂಕವನ್ನು ಕೊಡುವುದರಿಂದ ತಪ್ಪು ಮರೆಮಾಚಲು ಸಾಧ್ಯವಿಲ್ಲ
Next articleಪ್ರಿಯಾಂಕ್‌ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ