ಹೋರಾಟ ಹತ್ತಿಕ್ಕುವ ಯತ್ನ

0
18

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಸುವರ್ಣಸೌಧದ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಖಾಕಿ ಲಾಠಿ ಪ್ರಹಾರ ನಡೆಸಿರುವುದು ಖಂಡಿಸಿ ಮಾತನಾಡಿದ ಅವರು ಪೊಲೀಸರ ಮೂಲಕ ಸಿಎಂ ಸಿದ್ದರಾಮಯ್ಯ ಪಂಚಮಸಾಲಿ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆಸಿದ್ದಾರೆ, ಸಿಎಂ ಪ್ರತಿಭಟನಾ ಸ್ಥಳಕ್ಕೆ ಹೋಗಿ ಅಹವಾಲು ಸ್ವೀಕರಿಸಬೇಕಿತ್ತು. ಸಿಎಂ ಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ, ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನ ಬೆದರಿಸುವ ಯತ್ನ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ಕೂಡಲೇ ಸಿಎಂ ಕ್ಷಮೆಯಾಚಿಸಬೇಕು.
ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸವಿಲ್ಲವೆಂಬಂತೆ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಈ ಕೂಡಲೇ ಪಂಚಮಸಾಲಿ ಸಮಾಜದ ಕ್ಷಮೆ ಯಾಚಿಸಿ, ದಬ್ಬಾಳಿಕೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Previous articleಶರಾವತಿ ಸಂತ್ರಸ್ತರ ಸಮಸ್ಯೆ : ಸಮಸ್ಯೆಯಾಗಿ ಉಳಿದುಕೊಂಡಿದೆ
Next articleಕಾಂಗ್ರೆಸ್‌ನ ಮಾಜಿ ಶಾಸಕ ಆರ್. ನಾರಾಯಣ ನಿಧನ