SK Home Ad
Home ನಮ್ಮ ಜಿಲ್ಲೆ ಕಲಬುರಗಿ ೧೬೦೬ ಪಿಎಸ್‌ಐ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ

೧೬೦೬ ಪಿಎಸ್‌ಐ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ

0
164

ಕಲಬುರಗಿ: ೫೪೫ ಪಿಎಸ್‌ಐ ಹುದ್ದೆ ಸೇರಿ ಒಟ್ಟು ೧೬೦೬ ಪಿಎಸ್‌ಐ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಇಲ್ಲಿನ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಪಿಎಸ್‌ಐ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿಯೇ ಕೇಂದ್ರೀಕರಿಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ದೂರದ ೭೦೦ ಕಿ.ಮೀನಿಂದ ಬೀದರ, ಕಲಬುರಗಿ ಜಿಲ್ಲೆಯ ಜನರಿಗೆ ತೊಂದರೆ ಆಗುವುದು ನಿಜ, ಪಾರದರ್ಶಕ, ಶಿಸ್ತಿನ ಪರೀಕ್ಷೆ ನಡೆಸಲು ನಿರ್ಧಾರಕ್ಕೆ ಬರಲಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಜಗದೇವ ಗುತ್ತೇದಾರ್, ಬಾಬು ಹೊನ್ನನಾಯಕ ಮತ್ತಿತರರಿದ್ದರು.