108 ವರ್ಷಗಳ ಇತಿಹಾಸದಲ್ಲೇ ಸಾರ್ವಕಾಲಿಕ ಸಾಧನೆ!

0
26

KSDL: ಮೇ ತಿಂಗಳಲ್ಲಿ ₹186 ಕೋಟಿ ವಹಿವಾಟಿನ ದಾಖಲೆ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ KSDL ಸಂಸ್ಥೆಯನ್ನು ಬಲಪಡಿಸಿ ಮಾರುಕಟ್ಟೆಯನ್ನು ವಿಸ್ತರಿಸರಿಸಿದ ಪರಿಣಾಮ ಸಂಸ್ಥೆಯ ಸಾಧನೆ ಏರುಗತಿಯ ಹಾದಿಯಲ್ಲಿಯೇ ಮುಂದುವರೆಯುತ್ತಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಮೇ ತಿಂಗಳಲ್ಲಿ ₹186 ಕೋಟಿ ಮೌಲ್ಯದ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಸ್ಥಾಪಿಸಿದೆ. 108 ವರ್ಷಗಳ ಇತಿಹಾಸದಲ್ಲಿ ಕೇವಲ 1ತಿಂಗಳಲ್ಲಿ ಹೀಗೆ ಭಾರೀ ವಹಿವಾಟು ನಡೆಸಿರುವುದು ಇದೇ ಪ್ರಪ್ರಥಮ.

ಸಂಸ್ಥೆಗೆ ಮೇ ತಿಂಗಳಲ್ಲಿ 151.50 ಕೋಟಿ ರೂ. ವಹಿವಾಟಿನ ಗುರಿ ನಿಗದಿಪಡಿಸಲಾಗಿತ್ತು. ಅದಕ್ಕಿಂತ ₹35 ಕೋಟಿ ಹೆಚ್ಚಿನ ವಹಿವಾಟು ನಡೆಸುವ ಮೂಲಕ ಶೇಕಡ 120ರಷ್ಟು ಸಾಧನೆ ಮತ್ತು ಶೇಕಡ 15ರಷ್ಟು ಬೆಳವಣಿಗೆ ಸಾಧಿಸಲಾಗಿದೆ. ಈ ವಹಿವಾಟಿನ ಪೈಕಿ ರಫ್ತಿನ ಮೂಲಕ 1.81 ಕೋಟಿ ರೂ. ಗಳಿಸಲಾಗಿದೆ. ರಫ್ತು ವಹಿವಾಟನ್ನು ವಾರ್ಷಿಕವಾಗಿ 150 ಕೋಟಿ ರೂ.ಗೆ ಕೊಂಡೊಯ್ಯುವ ಗುರಿ ಇದೆ.

ಸಂಸ್ಥೆಯು ತಯಾರಿಸುವ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಎಲ್ಲಾ 45 ಬಗೆಯ ಉತ್ಪನ್ನಗಳು ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬಯಿ, ಕೋಲ್ಕತ್ತ, ನವದೆಹಲಿ ಶಾಖೆಗಳಲ್ಲಿ ಮತ್ತು ಬೆಂಗಳೂರಿನ ನೇರ ಮಾರುಕಟ್ಟೆ ವಿಭಾಗದ ಮೂಲಕ ನಿರೀಕ್ಷೆಗೂ ಮೀರಿ ಮಾರಾಟವಾಗಿವೆ.

KSDL ಉತ್ಪನ್ನಗಳಾದ ಸಾಬೂನು, ಶವರ್ ಜೆಲ್, ಅಗರಬತ್ತಿ ಮುಂತಾದವುಗಳಿಗೆ ವ್ಯಾಪಕ ಬೇಡಿಕೆ ಬರುತ್ತಿದೆ. ಸಂಸ್ಥೆಯಲ್ಲಿ ಗುಣಮಟ್ಟದ ಉತ್ಪಾದನೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ವಿಸ್ತರಣೆಗೆ ಕೈಗೊಂಡಿರುವ ಪ್ರಯತ್ನಗಳು ಫಲ ಕೊಡುತ್ತಿವೆ

ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲೇ ಅತಿ ಹೆಚ್ಚು ಅಂದದೆ ₹85 ಕೋಟಿ ವಹಿವಾಟು ನಡೆದಿದೆ. ಉಳಿದ ₹100 ಕೋಟಿ ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲಿ ಆಗಿದೆ.

ಈ ಹಿಂದೆ 2024ರ ಸೆಪ್ಟೆಂಬರ್ ತಿಂಗಳೊಂದರಲ್ಲೇ 178 ಕೋಟಿ ರೂ. ಮೌಲ್ಯದ ಉತ್ಪನ್ನಗಳನ್ನು ಮಾರಾಟ ಮಾಡಿದ್ದು ಇದುವರೆಗಿನ ದಾಖಲೆಯಾಗಿತ್ತು. ಈಗ ಆ ದಾಖಲೆಯನ್ನು ದಾಟಲಾಗಿದೆ.

KSDL ನ ಅಭಿವೃದ್ಧಿಯ ಈ ಪರ್ವ ಮುಂದುವರೆಯಲಿದೆ ಎಂದಿದ್ದಾರೆ.

Previous articleಹೇಮಾವತಿ ಯೋಜನೆ: ಎರಡು ಜಿಲ್ಲೆಗಳ ನಡುವೆ ಕಂದಕ ಸೃಷ್ಟಿ
Next articleRCB ದಿಗ್ಗಜರ ಮಾತು: ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್..