Home News 11 ಆಟಗಾರರನ್ನು ಕೈಬಿಟ್ಟ ಆರ್‌ಸಿಬಿ

11 ಆಟಗಾರರನ್ನು ಕೈಬಿಟ್ಟ ಆರ್‌ಸಿಬಿ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2024 ಹರಾಜಿಗೆ ಸಿದ್ಧವಾಗಿದ್ದು, ಭಾನುವಾರ ನಡೆದ ಕಾರ್ಯಕ್ರಮದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ರಿಟೇನ್‌, ರಿಲೀಸ್‌ ಮಾಡಿದ ಆಟಗಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚಿದ್ದ ಜೋಶ್‌ ಹ್ಯಾಜಲ್‌ವುಡ್‌, ವಾನಿಂದು ಹಸರಂಗ ಸೇರಿದಂತೆ 11 ಆಟಗಾರರಿಗೆ ಆರ್‌ಸಿಬಿ ಗೇಟ್‌ಪಾಸ್‌ ನೀಡಿದೆ.
ಫಾಫ್‌ ಡುಪ್ಲೆಸಿಸ್‌(ಕ್ಯಾಪ್ಟನ್‌), ಗ್ಲೆನ್‌ ಮ್ಯಾಕ್ಸ್‌ವೆಲ್‌, ವಿರಾಟ್‌ ಕೊಹ್ಲಿ, ದಿನೇಶ್‌ ಕಾರ್ತಿಕ್‌, ರಜತ್‌ ಪಾಟಿದಾರ್‌, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್, ಮಹಿಪಾಲ್ ಲೋಮ್ರೋರ್, ಅನುಜ್‌ ರಾವತ್‌, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಆಕಾಶ್ ದೀಪ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್ ತಂಡಕ್ಕೆ ರಿಟೇನ್‌ ಆಗಿದ್ದಾರೆ.
ಕೈಬಿಟ್ಟ ಆಟಗಾರರು:
ಜೋಶ್ ಹ್ಯಾಜಲ್‌ವುಡ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್ ಆಟಗಾರರನ್ನು ತಂಡದಿಂದ ಕೈಬಿಡಲಾಗಿದೆ.

Exit mobile version