Home ನಮ್ಮ ಜಿಲ್ಲೆ ಕೊಪ್ಪಳ 12 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

12 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

0
kanakagiri

ಕೊಪ್ಪಳ(ಕನಕಗಿರಿ): ಕನಕಗಿರಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ 12 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಈ ಬಾಲಕಿಯರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಳ ಬಿದ್ದ ಆಹಾರ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸ್ವಚ್ಛಗೊಳಿಸದ ಆಹಾರ ಧಾನ್ಯ ಬಳಸಿ ಅಡುಗೆ ಮಾಡಿದ್ದು ಕೂಡಾ ಕಾರಣವಾಗಿದೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ಹೀಗಾಗಿ ಬೆಳಿಗ್ಗೆಯೇ ವಿದ್ಯಾರ್ಥಿಗಳನ್ನು ಕನಕಗಿರಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲ ದಿನಗಳ ಹಿಂದೆಯೇ ಕೊಪ್ಪಳದ ವಸತಿ ನಿಲಯವೊಂದರಲ್ಲಿ ಕೂಡಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಬಾಲಕಿಯರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಾಧಿಕಾರಿ ಡಾ. ರಾಘವೇಂದ್ರ ತಿಳಿಸಿದ್ದಾರೆ.

Exit mobile version