ನವದೆಹಲಿ: ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಅಧಿಸೂಚನೆ ಹೊರಡಿಸಿದೆ.
ಅಸ್ಸಾಂ, ಬಿಹಾರ, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತ್ರಿಪುರಾ, ತೆಲಂಗಾಣ ಹಾಗೂ ಒಡಿಶಾ ರಾಜ್ಯಗಳ 12 ಸ್ಥಾನಗಳಿಗೆ ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 12ರಂದು ಮತದಾನ ನಡೆಯಲಿದ್ದು, 9 ರಾಜ್ಯಗಳ ವಿಧಾನಸಭೆಗಳ ಮೂಲಕ ಸದಸ್ಯರು ಆಯ್ಕೆಯಾಗಲಿದ್ದಾರೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಹಾಗೂ ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಹಲವರು ಲೋಕಸಭೆಗೆ ಆಯ್ಕೆಯಾಗಿರುವ ಕಾರಣ ಸ್ಥಾನಗಳು ಖಾಲಿಯಾಗಿವೆ.