Home Advertisement
Home ತಾಜಾ ಸುದ್ದಿ 13 ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡಗಡೆ: ಭಾವನಾತ್ಮಕ ಪತ್ರ ಬರೆದ ಸಚಿವೆ

13 ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡಗಡೆ: ಭಾವನಾತ್ಮಕ ಪತ್ರ ಬರೆದ ಸಚಿವೆ

0
104

ನನಗೆ ಆಗಬಾರದ ದುರ್ಘಟನೆ ಆಯಿತು. ಇದು ಪುನರ್ಜನ್ಮ

ಬೆಳಗಾವಿ: 13 ದಿನಗಳ ಕಾಲ ಚಿಕಿತ್ಸ ಪಡೆದು ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಇದು ಪುನರ್ಜನ್ಮ ಅನಿಸುತ್ತೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

ಸಚಿವೆಯಿಂದ ವೈದ್ಯರಿಗೆ ಭಾವನಾತ್ಮಕ ಪತ್ರ: ಪ್ರಿಯ ವೈದ್ಯರೇ, ಕಳೆದ 13 ದಿನಗಳು ಇಲ್ಲಿ ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು, ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ ಪಕ್ಕದಲ್ಲಿ ನಿಂತು, ಪ್ರಬಲವಾದ ಬೆಂಬಲ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ದಯೆ, ತಾಳ್ಮೆ ಮತ್ತು ಸಮರ್ಪಣೆ ಹೃದಯಸ್ಪರ್ಶಿಯಾಗಿತ್ತು. ನೀವು ಹಗಲಿರುಳು ನನ್ನೊಂದಿಗೆ ಇದ್ದು ನಾನು ಸದೃಢವಾಗಲು ಕಾರಣರಾಗಿದ್ದೀರಿ ಮತ್ತು ಧೈರ್ಯ ಕಳೆದುಕೊಳ್ಳದಂತೆ ಪ್ರೇರೇಪಿಸಿದ್ದೀರಿ. ನಿಮ್ಮ ಪ್ರೋತ್ಸಾಹ ನನಗೆ ಶೀಘ್ರ ಗುಣಮುಖನಾಗಲು ಶಕ್ತಿಯನ್ನು ನೀಡಿತು ಮತ್ತು ನಿಮ್ಮ ಸಹಾನುಭೂತಿ ಮತ್ತು ಪರಿಣತಿಗೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೇನೆ. ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಯಶ ಸಿಗಲಿ, ನಿಮಗೆ ಅತ್ಯಂತ ಉಜ್ವಲ ಭವಿಷ್ಯ ಮತ್ತು ಯಶಸ್ಸನ್ನು ಹಾರೈಸುತ್ತೇನೆ ” ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪತ್ರದಲ್ಲಿ ತಿಳಿಸಿದ್ದಾರೆ.