15ರಂದು ಜೋಶಿ ನಾಮಪತ್ರ ಸಲ್ಲಿಕೆ

0
23
ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಏ. ೧೫ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಧಾರವಾಡದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಲಿದ್ದಾರೆ. ಪ್ರಚಾರಕ್ಕೆ ಯಾವೆಲ್ಲ ನಾಯಕರು ಬರಲಿದ್ದಾರೆ ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಇನ್ನೆರಡು ದಿನದಲ್ಲಿ ಎಲ್ಲವೂ ತಿಳಿಯಲಿದೆ ಎಂದರು.

Previous articleತೆವಲಿಗಾಗಿ ಮಾತನಾಡುವುದನ್ನು ಬಿಡಿ
Next articleಟೆರೇಸ್ ಮೇಲೆ ಗಾಂಜಾ ಕೃಷಿ: ಬ್ರಿಟಿಷ್ ಪ್ರಜೆ ಬಂಧನ