ಬೆಂಗಳೂರು: 15,000+ ಕೋಟಿ ಮೊತ್ತದ ಹೂಡಿಕೆ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು 5,200+ ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತಮಟ್ಟದ ಅನುಮೋದನಾ ಸಮಿತಿ (#SHLCC) ಸಭೆಯಲ್ಲಿ ಸುಮಾರು ರೂ. 15,000+ ಕೋಟಿ ಮೊತ್ತದ ಹೂಡಿಕೆ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಈ ಯೋಜನೆಗಳು ರಾಜ್ಯಾದ್ಯಂತ ನೂತನ ಕೈಗಾರಿಕೆಗಳು ಹಾಗೂ ಹೆಚ್ಚುವರಿ ಹೂಡಿಕೆಗಳನ್ನು ಒಳಗೊಂಡಿವೆ. ಕರ್ನಾಟಕದಾದ್ಯಂತ ಈ ನೂತನ ಯೋಜನೆಗಳು ಕಾರ್ಯರೂಪಗೊಳ್ಳಲಿದ್ದು ಸುಮಾರು ಸುಮಾರು 5,200+ ಉದ್ಯೋಗಗಳು ಸೃಷ್ಟಿಯಾಗಲಿದೆ. ಈ ಮೂಲಕ ಕರ್ನಾಟಕದಲ್ಲಿ ಕೈಗಾರಿಕಾ ಪ್ರಗತಿ ಸಾಧಿಸುವ ಮತ್ತು ಉದ್ಯೋಗ ಸೃಷ್ಟಿಸುವ ನಮ್ಮ ಕಾರ್ಯ ನಿರಂತರವಾಗಿರಲಿದೆ ಎಂದಿದ್ದಾರೆ