150+ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ: ಬಿಎಸ್‌ವೈ ವಿಶ್ವಾಸ

0
22
ಯಡಿಯೂರಪ್ಪ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೇರಲು ಬಿಡಲ್ಲ, ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಪ್ರಧಾನಿ ಆಗಿರುವವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದಿದ್ದೆ, ಈಗಲೂ ಹೇಳುತ್ತಿದ್ದೇನೆ. ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬರಲು ಬಿಡಲ್ಲ,‌ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೈತರು ಮತ್ತು ನೇಕಾರರು ನಮ್ಮ ಪಕ್ಷದ ಎರಡು ಕಣ್ಣುಗಳಿದ್ದಂತೆ. ನಾವು ರೈತರಿಗೆ ಕೊಟ್ಟಷ್ಟು ಯೋಜನೆ ಬೇರೆ ಯಾವ ರಾಜ್ಯದಲ್ಲಿಯೂ ಕೊಟ್ಟಿಲ್ಲ ಎಂದರು.

Previous articleಲಂಚ ಹೊಡೆದ ಹಣದಲ್ಲಿ ಬಿಜೆಪಿ ಸರ್ಕಾರದ ಜನಸ್ಪಂದನ ಸಮಾವೇಶ
Next articleಕಿಂಗ್ ಚಾರ್ಲ್ಸ್ III ʻಬ್ರಿಟನ್‌ ರಾಜʼ ಅಧಿಕೃತ ಘೋಷಣೆ