Home ನಮ್ಮ ಜಿಲ್ಲೆ ಕಲಬುರಗಿ 17 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ

17 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ

0

ಕಲಬುರಗಿ: 17 ಸಾವಿರ ರೂಪಾಯಿ ಫೋನ್ ಪೇ ಮೂಲಕ ಲಂಚ ಪಡೆಯುವಾಗ ಪಿಡಿಒ ಅಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಗರದ ದರಿಯಾಪುರದಲ್ಲಿ ನಡೆದಿದೆ.
ಕಲಬುರಗಿಯ ತಾಲೂಕಿನ ಕವಲಗಾ (ಬಿ) ಗ್ರಾಮದ ಪಿಡಿಒ ಪ್ರೀತಿರಾಜ್ ಎಂಬಾತರೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕವಲಗಾ (ಬಿ) ಗ್ರಾಮದ ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಗೆ ಕೆಲಸಕ್ಕೆ ಪುನಃ ತೆಗೆದುಕೊಳ್ಳಲು ಮತ್ತು ಆರು ತಿಂಗಳ ವೇತನವನ್ನು ಮಂಜೂರು ಮಾಡುವ ಸಲುವಾಗಿ ಹಣ ಬೇಡಿಕೆ ಇಟ್ಟಿದ್ದರು.
ಈ ಕುರಿತು ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿ ಮಸೂದ್, ಮಲ್ಲಿನಾಥ್, ಬಸವರಾಜ್, ಸಂತೋಷಿ, ಮಧುಮತಿ, ಪ್ರಮೋದ್ ಅವರನ್ನು ಒಳಗೊಂಡ ತಂಡವು ದಾಳಿ ನಡೆಸಿ, ಪಿಡಿಒ ಅಧಿಕಾರಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

Exit mobile version