18 ಶಾಸಕರ ಅಮಾನತು ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

0
13

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು 6 ತಿಂಗಳುಗಳಕಾಲ ಅಮಾನತು ಮಾಡಿ ಸಂವಿಧಾನ ವಿರೋಧಿ ನಡೆಯಲ್ಲಿ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್‌ ಅಶೋಕ ನೇತ್ರತ್ವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ತಂಡವು ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಅವರು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದರು,

Previous articleಕಾಂಗ್ರೆಸ್‌ ಜನಾಕ್ರೋಶ ಸಭೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ಪೊಲೀಸ್‌ ಅಧಿಕಾರಿ ವಿರುದ್ಧವೇ ಸಿಎಂ ಗರಂ
Next articleಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕು: ಯತ್ನಾಳ ಆಗ್ರಹ